ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಿಯಾಗೆ ಅತ್ಯುನ್ನತ ಶ್ರೇಣಿ

Update: 2019-05-04 14:45 GMT

ಮೂಡಿಗೆರೆ, ಮೇ 2: ಕಡೂರು ತಾಲೂಕಿನ ಚೌಳ ಹಿರಿಯೂರಿನ ಶ್ರೀ ಸೋಮೇಶ್ವರ ಪ್ರೌಢಶಾಲೆಯ ಪ್ರಿಯಾ ಎಚ್. ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ 562 ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾಳೆ.

ಆಂಜನಪ್ಪ ಮತ್ತು ಪಾರ್ವತಮ್ಮ ದಂಪತಿಯ ಪುತ್ರಿಯಾದ ಪ್ರಿಯಾ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾಳೆ. ವಿದ್ಯಾರ್ಥಿನಿ ಪ್ರಿಯಾಳಿಗೆ ಶಾಲೆಯ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News