×
Ad

ಮಹಾರಾಷ್ಟ್ರ ಸಿಎಂಗೆ ರಾಜ್ಯ ಸರಕಾರದ ಅಭಿನಂದನೆ

Update: 2019-05-04 20:16 IST

ಬೆಂಗಳೂರು, ಮೇ 4: ರಾಜ್ಯ ಸರಕಾರ ಪತ್ರ ಬರೆದು ಮಾಡಿರುವ ಮನವಿಗೆ ಸ್ಪಂದಿಸಿ ನೀರು ಹರಿಸಲು ಮುಂದಾಗಿರುವ ಮಹಾರಾಷ್ಟ್ರ ಸರಕಾರದ ನಡೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿನಂದಿಸಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಬರಗಾಲದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಮಹಾರಾಷ್ಟ್ರ ಸರಕಾರಕ್ಕೆ ಪತ್ರಗಳನ್ನು ಬರೆದು ನೀರು ಹರಿಸಲು ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿರುವ ಮಹಾರಾಷ್ಟ್ರ ಸರಕಾರ ನೀರು ಹರಿಸಲು ಸಮ್ಮತಿಸಿದೆ ಎಂದು ಸಿಎಂ ಕಚೇರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News