ಜೂನ್ 30ರೊಳಗೆ ಆಸ್ತಿ ವಿವರ ಸಲ್ಲಿಸಲು ಶಾಸಕರಿಗೆ ಸೂಚನೆ

Update: 2019-05-04 15:01 GMT

ಬೆಂಗಳೂರು, ಮೇ 4: ಮುಂಬರುವ ಜೂನ್ 30ರ ಒಳಗೆ ಶಾಸಕರು ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಲು ಸೂಚಿಸಲಾಗಿದೆ.

2018-19ನೆ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬದ ಆಸ್ತಿ ವಿವರವನ್ನು ಶಾಸಕರು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬೇಕಾಗಿದೆ. ಈ ಸಂಬಂಧ ಲೋಕಾಯುಕ್ತ ನಿಂಬಂಧಕರು ವಿಧಾನಸಭೆ ಕಾರ್ಯದರ್ಶಿಗೆ ಆಸ್ತಿ ವಿವರ ಸಲ್ಲಿಸಬೇಕಾಗಿರುವ ಎಲ್ಲ ಶಾಸಕರಿಗೆ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದ್ದಾರೆ.

ಲೋಕಾಯುಕ್ತ ಕಾಯಿದೆ 1984ರ ಕಲಂ 7ರ ಉಪಕಲಂ(1)ರಲ್ಲಿ ಉಲ್ಲೇಖಿಸಿರುವಂತೆ ಶಾಸಕರು ತಮ್ಮ ಹಾಗೂ ತಮ್ಮ ಕುಟುಂಬದ ಆಸ್ತಿ ಪಟ್ಟಿಯನ್ನು ನಿಗದಿತ ನಮೂನೆಯಲ್ಲಿ ಜೂ.30ರೊಳಗೆ ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಸದಸ್ಯರು ಆಸ್ತಿ ವಿವರವನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News