×
Ad

ವೈಟ್‌ಫೀಲ್ಡ್ ಪೊಲೀಸರ ಕಾರ್ಯಾಚರಣೆ: ಇಬ್ಬರ ಬಂಧನ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

Update: 2019-05-04 21:57 IST

ಬೆಂಗಳೂರು, ಮೇ 4: ಚಿನ್ನಾಭರಣ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಆರೋದಪಡಿ ವೈಟ್‌ಫೀಲ್ಡ್ ವಿಭಾಗದ ವರ್ತೂರು ಠಾಣಾ ಪೊಲೀಸರು, ಇಬ್ಬರನ್ನು ಬಂಧಿಸಿ, 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಕಾಶ್ ಹಾಗೂ ಜಗನ್ನಾಥ್ ಎಂಬುವರು ಬಂಧಿತ ಆರೋಪಿಗಳಾಗಿದ್ದಾರೆ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಬ್ದುಲ್ ಅಹದ್ ತಿಳಿಸಿದ್ದಾರೆ.

ಆರೋಪಿಗಳ ಬಂಧನದಿಂದ ವರ್ತೂರು ಠಾಣೆಯ ಚಿನ್ನಾಭರಣ ಅಂಗಡಿ ಕಳ್ಳತನ, ಬೆಂಗಳೂರು ಗ್ರಾಮಾಂತರ ವಿಜಯಪುರ ಠಾಣೆಯ ಎಟಿಎಂ ಸೇರಿ ಒಟ್ಟು ಮೂರು ಪ್ರಕರಣಗಳು ಬೆಳಕಿಗೆ ಬಂದಿದ್ದು, ಇವರಿಂದ ಒಂದು ಬೈಕ್, 120 ಗ್ರಾಂ ಚಿನ್ನ, 1.5 ಕೆಜಿ ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News