ಮೇಘಾಲಯದಲ್ಲಿ ಭಾರೀ ಮಳೆ

Update: 2019-05-04 17:09 GMT

ಹೊಸದಿಲ್ಲಿ: ಫನಿ ಚಂಡಮಾರುತದ ಪ್ರಭಾವದಿಂದ ಮೇಘಾಲಯದಲ್ಲಿ ಶನಿವಾರ ಭಾರೀ ಮಳೆ ಸುರಿದಿದೆ. ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಹರಿಯುತ್ತಿರುವ ದಾವ್ಕಿ ನದಿ ಉಕ್ಕಿ ಹರಿಯುತ್ತಿದ್ದು, ಸೇತುವೆಯೊಂದು ಕೊಚ್ಚಿಕೊಂಡು ಹೋಗಿದೆ. ಜೊವಾಯಿಯಲ್ಲಿರುವ ಕರಂಗ್ ಸುರಿ ಜಲಪಾತ ಹಾಗೂ ಇತರ ಜಲಪಾತಗಳು ತುಂಬಿ ಹರಿಯುತ್ತಿವೆ. ತೀವ್ರ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಮೇಘಾಲಯ ಸರಕಾರ ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ನೆರವು ಕೋರಿದೆ. ಮೇಘಾಲಯ ಸೇರಿದಂತೆ ಈಶಾನ್ಯದಾದ್ಯಂತ ಮುಂದಿನ 48 ಗಂಟೆಗಳಲ್ಲಿ ಗುಡುಗು, ಬಿರುಗಾಳಿಯಿಂದ ಕೂಡಿದ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News