ನದಿಯಲ್ಲಿ ಮುಳುಗಿದ್ದ ವ್ಯಕ್ತಿಯ ಶವ ಪತ್ತೆ
Update: 2019-05-04 22:49 IST
ಶಿವಮೊಗ್ಗ, ಮೇ 4: ತುಂಗಾಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಶುಕ್ರವಾರ ಪತ್ತೆಯಾಗಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಸನ್ಯಾಸಿ ಕೊಡಮಗ್ಗಿ ಗ್ರಾಮದಲ್ಲಿ ನಡೆದಿದೆ.
ಫಾಲಾಕ್ಷಪ್ಪ (50) ಎಂಬುವರೇ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ತುಂಗಾಭದ್ರಾ ನದಿಯಲ್ಲಿ ಜಾನುವಾರುಗಳಿಗೆ ಸ್ನಾನ ಮಾಡಿಸಲು ತೆರಳಿದ್ದ ವೇಳೆ ಇವರು ನೀರು ಪಾಲಾಗಿದ್ದರು. ಅಗ್ನಿಶಾಮಕ ದಳ ಹಾಗೂ ಈಜುಗಾರರು ಶವಕ್ಕೆ ಶೋಧ ನಡೆಸಿದ್ದರು. ಆದರೆ ಪತ್ತೆಯಾಗಿರಲಿಲ್ಲ. ಆದರೆ ಶುಕ್ರವಾರ ಸೇತುವೆ ಸಮೀಪ ಶವ ಪತ್ತೆಯಾಗಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.