ಕ್ರಿಮಿನಲ್ ಪ್ರಕರಣಗಳಿರುವ ಅಭ್ಯರ್ಥಿಗಳಲ್ಲಿ ಬಿಜೆಪಿಗೆ ಅಗ್ರಸ್ಥಾನ

Update: 2019-05-05 14:55 GMT

ಹೊಸದಿಲ್ಲಿ,ಮೇ 5: ದಿಲ್ಲಿಯಲ್ಲಿ ಲೋಕಸಭಾ ಚುನಾವಣೆಗಾಗಿ ಕಣದಲ್ಲಿರುವ,ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಅತ್ಯಂತ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಬಿಜೆಪಿಗೆ ಸೇರಿದವರಾಗಿದ್ದಾರೆ. ಆಪ್ ನಂತರದ ಸ್ಥಾನದಲ್ಲಿದೆ.

ಮೇ 12ರಂದು ಮತದಾನ ನಡೆಯಲಿರುವ ದಿಲ್ಲಿಯ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ,ಆಪ್ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆಯೇರ್ಪಟ್ಟಿದೆ.

ಬಿಜೆಪಿಯ ಏಳು ಅಭ್ಯರ್ಥಿಗಳ ಪೈಕಿ ಮೂವರು ಮತ್ತು ಆಪ್‌ನ ಇಬ್ಬರು ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್‌ನ ಓರ್ವ ಅಭ್ಯರ್ಥಿ ಮಾತ್ರ ತನ್ನ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ.

 ಈಶಾನ್ಯ ದಿಲ್ಲಿ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದ ಮನೋಜ್ ತಿವಾರಿ ಮೂರು ಮತ್ತು ಆಪ್‌ನ ದಿಲೀಪ್ ಪಾಂಡೆ ಒಂದು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದರೆ,ಪೂರ್ವ ದಿಲ್ಲಿ ಕ್ಷೇತ್ರದಲ್ಲಿ ಬಿಜೆಪಿಯ ಗೌತಮ ಗಂಭೀರ್ ಮತ್ತು ಆಪ್‌ನ ಅತಿಷಿ ತಲಾ ಒಂದು ಕ್ರಿಮಿನಲ್ ಪ್ರಕರಣ ಹೊಂದಿದ್ದಾರೆ. ದಕ್ಷಿಣ ದಿಲ್ಲಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಬಿದುರಿ ತನ್ನ ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳಿರುವುದಾಗಿ ಘೋಷಿಸಿದ್ದಾರೆ. ಪಶ್ಚಿಮ ದಿಲ್ಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಹಾಬಲ ಮಿಶ್ರಾ ವಿರುದ್ಧ ಮೂರು ಕ್ರಿಮಿನಲ್ ಪ್ರಕರಣಗಳಿವೆ.

 2014ರ ಲೋಕಸಭಾ ಚುನಾವಣೆಯಲ್ಲಿ ದಿಲ್ಲಿಯ ಎಲ್ಲ ಏಳೂ ಕ್ಷೇತ್ರಗಳನ್ನು ಬಿಜೆಪಿ ಗೆದ್ದುಕೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News