ರಾಜ್ಯಾದ್ಯಂತ ಮಂಗಳವಾರದಿಂದ ರಮಝಾನ್

Update: 2019-05-05 16:37 GMT

ಬೆಂಗಳೂರು, ಮೇ 5: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ (ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ) ಮಂಗಳವಾರದಿಂದ ಪವಿತ್ರ ರಮಝಾನ್ ಮಾಸದ ಉಪವಾಸ ವ್ರತ ಆಚರಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ರವಿವಾರ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಚಂದ್ರ ದರ್ಶನ ಸಮಿತಿಯ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 

ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯದ ಯಾವುದೇ ಭಾಗದಲ್ಲಿ ಚಂದ್ರ ದರ್ಶನವಾದ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಮಂಗಳವಾರದಿಂದ ಉಪವಾಸ ಆಚರಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಹಿರಿಯ ಧಾರ್ಮಿಕ ಮುಖಂಡರು, ಚಂದ್ರ ದರ್ಶನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News