ದಿನಪತ್ರಿಕೆ ವಿತರಕರಿಗೆ ಸೌಲಭ್ಯಗಳು ಸಿಗಬೇಕು: ಶಾಸಕ ರವಿಸುಬ್ರಹ್ಮಣ್ಯ

Update: 2019-05-05 16:26 GMT

ಬೆಂಗಳೂರು, ಮೇ 5: ಮಳೆ, ಚಳಿ ಎನ್ನದೆ ಬೆಳಕು ಮೂಡುವ ಮುನ್ನವೆ ಮನೆಗಳಿಗೆ ದಿನ ಪತ್ರಿಕೆಗಳನ್ನು ತಲುಪಿಸುವ ಪತ್ರಿಕಾ ವಿತರಿಕರಿಗೆ ಅಗತ್ಯವಾದ ಸೌಲಭ್ಯಗಳು ಸಿಗುವ ನಿಟ್ಟಿನಲ್ಲಿ ಪತ್ರಿಕಾ ಮಾಲಕರು, ಏಜೆಂಟ್‌ಗಳು ಕ್ರಮ ಕೈಗೊಳ್ಳಬೇಕೆಂದು ಶಾಸಕ ಎಲ್.ವಿ. ರವಿಸುಬ್ರಹ್ಮಣ್ಯ ತಿಳಿಸಿದರು.

ನಗರದ ಬ್ಯಾಂಕ್ ಕಾಲೋನಿಯಲ್ಲಿ ನೂತನವಾಗಿ ಆರಂಭಿಸಿರುವ ದಿನಪತ್ರಿಕೆ ವಿತರಕರ ಪತ್ತಿನ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕಾ ವಿತರಕರಿಗೆ ಸಣ್ಣ ಪ್ರಮಾಣದಲ್ಲಾದರು ಆರ್ಥಿಕ ಸಹಕಾರ ನೀಡುವ ನಿಟ್ಟಿನಲ್ಲಿ ಪತ್ರಿಕಾ ಮಾಲಕರು, ಪತ್ರಿಕಾ ಏಜೆಂಟ್‌ಗಳು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ದಿನಪತ್ರಿಕೆ ವಿತರಕರಿಗಾಗಿಯೆ ಪತ್ತಿನ ಸಹಕಾರ ಸಂಘ ಸ್ಥಾಪನೆಗೊಂಡಿರುವುದು ಸಂತಸದ ವಿಷಯವಾಗಿದೆ. ಈ ಸಂಘವು ಆಡಂಬರಕ್ಕೆ ಹೆಚ್ಚಿನ ಆದ್ಯತೆ ಕೊಡದೆ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸಲು, ಇವರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಲು ಸಂಘ, ಸಂಸ್ಥೆಗಳು ಮುಂದಾಗಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘ ಮಹಾಮಂಡಳಿಯ ಅಧ್ಯಕ್ಷ ಮಾರೇಗೌಡ, ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಡಾ.ವಿ. ನಾಗೇಂದ್ರ ಪ್ರಸಾದ್, ಚಿಗುರು ಬಾಲವಿಕಾಸ ಸಂಸ್ಥೆಯ ಅಧ್ಯಕ್ಷೆ ಕೆ.ಎಸ್.ಸರೋಜಮ್ಮ, ಭೂಮಿಕಾ ಪತ್ರಿಕೆಯ ಸಂಪಾದಕ ಲಕ್ಷ್ಮಣ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News