×
Ad

ಪ್ರಧಾನಿ ಮೋದಿ ಕರೆಯನ್ನು ಮಮತಾ ಬ್ಯಾನರ್ಜಿ ಸ್ವೀಕರಿಸಿಲ್ಲ: ಅಧಿಕಾರಿಗಳು

Update: 2019-05-05 22:11 IST

ಹೊಸಲ್ಲ್ಲಿ, ಮೇ.5: ಫನಿ ಚಂಡಮಾರುತದ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆ ಮಾತನಾಡಲು ಪ್ರಧಾನಿ ಮೋದಿ ಪ್ರಯತ್ನಿಸಿದರೂ ಅವರ ಕರೆಗೆ ಯಾವುದೇ ಸ್ಪಂದನೆ ಸಿಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಿಣಾಮವಾಗಿ ಪ್ರಧಾನಿ ಮೋದಿ ಪಶ್ಚಿಮ ಬಂಗಾಳ ರಾಜ್ಯಪಾಲ ಕೇಶರಿನಾಥ್ ತ್ರಿಪಾಠಿ ಜೊತೆ ಚಂಡಮಾರುತದ ಬಗ್ಗೆ ಸಮಾಲೋಚನೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬ್ಯಾನರ್ಜಿ ಜೊತೆ ಮೋದಿ ಮಾತನಾಡಲು ಪ್ರಧಾನಿ ಕಚೇರಿ ಸಿಬ್ಬಂದಿ ಫೋನ್‌ನಲ್ಲಿ ಎರಡು ಬಾರಿ ಪ್ರಯತ್ನಿಸಿದ್ದರು. ಆದರೆ ಎರಡು ಬಾರಿಯೂ ಮರುಕರೆ ಮಾಡುವುದಾಗಿ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದರೂ ಹಾಗಾಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ ಬ್ಯಾನರ್ಜಿ ಜೊತೆ ಪ್ರಧಾನಿ ಮೋದಿ ಚರ್ಚೆ ನಡೆಸಿಲ್ಲ ಎಂಬ ತೃಣಮೂಲ ಕಾಂಗ್ರೆಸ್ ಆರೋಪದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿ ಈ ಹೇಳಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News