×
Ad

‘ನೀಟ್’ ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ?

Update: 2019-05-06 17:31 IST

ಬೆಂಗಳೂರು, ಮೇ 6: ಹಂಪಿ ಎಕ್ಸ್‌ಪ್ರೆಸ್ ರೈಲು ವಿಳಂಬದಿಂದ ‘ನೀಟ್’ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕೆಂಬ ರಾಜ್ಯ ಸರಕಾರದ ಮನವಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಹಾಗೂ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಸುಮಾರು 500 ರಷ್ಟು ವಿದ್ಯಾರ್ಥಿಗಳು ಹಂಪಿ ಎಕ್ಸ್‌ಪ್ರೆಸ್ ರೈಲು 6 ಗಂಟೆ ತಡವಾಗಿ ಬಂದಿದ್ದರಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ನೀಟ್ ಪರೀಕ್ಷೆ ಅವಕಾಶ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ರಾಜ್ಯ ಸರಕಾರದಿಂದ ಮನವಿ ಮಾಡಲು ಮುಖ್ಯ ಕಾರ್ಯದರ್ಶಿ ಮತ್ತು ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಯಿತು.

ರಾಜ್ಯ ಸರಕಾರ ಮನವಿ ಸ್ಪಂದಿಸಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಆದಷ್ಟು ಶೀಘ್ರ ನಿರ್ಧಾರ ತೆಗೆದುಕೊಳುವುದು ಎಂದು ಭರವಸೆ ನೀಡಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News