ಮೇ 9ಕ್ಕೆ ಸಿಎಂ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

Update: 2019-05-06 14:22 GMT
ಫೈಲ್ ಚಿತ್ರ

ಬೆಂಗಳೂರು, ಮೇ 6: ರಾಜ್ಯದ ಬರ, ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆ ಸೇರಿದಂತೆ ಬರ ಪರಿಹಾರ ಕಾಮಗಾರಿ ಕೈಗೊಳ್ಳುವ ಕುರಿತು ಚರ್ಚಿಸಲು ಮೇ 9ರ ಗುರುವಾರ ಬೆಳಗ್ಗೆ 11:30ಕ್ಕೆ ಸಚಿವ ಸಂಪುಟ ಕರೆಯಲಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಮೂರನೆ ಮಹಡಿಯಲ್ಲಿನ ಸಚಿವ ಸಂಪುಟ ಸಭಾ ಮಂದಿರದಲ್ಲಿ ನಡೆಯಲಿರುವ ಸಭೆಯಲ್ಲಿ ಎಲ್ಲ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.

ಅಲ್ಲದೆ ಬರ ಪರಿಹಾರ, ಎರಡೂ ಕ್ಷೇತ್ರಗಳ ಉಪ ಚುನಾವಣೆ, ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಸೇರಿದಂತೆ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News