ಹೈಕೋರ್ಟ್ ನೂತನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಓಕಾ ಮೇ 10ಕ್ಕೆ ಪ್ರಮಾಣ
Update: 2019-05-06 20:00 IST
ಬೆಂಗಳೂರು, ಮೇ 6: ಮೇ 10 ರಂದು ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಮೇ 10ರ ಬೆಳಗ್ಗೆ 11ಗಂಟೆಗೆ ಇಲ್ಲಿನ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಹೈಕೋರ್ಟಿನ ನೂತನ ಮುಖ್ಯ ನ್ಯಾಯಾಧೀಶರಾಗಿ ಓಕಾ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.