ಪ.ಬಂಗಾಲದಲ್ಲಿ ಪತ್ರಕರ್ತರ ಮೇಲೆ ಹಲ್ಲೆ: ಸೂಕ್ತ ಕ್ರಮಕ್ಕಾಗಿ ಇಸಿಗೆ ಎಡಿಟರ್ಸ್ ಗಿಲ್ಡ್ ಆಗ್ರಹ

Update: 2019-05-07 13:29 GMT

ಹೊಸದಿಲ್ಲಿ,ಮೇ 7: ಪಶ್ಚಿಮ ಬಂಗಾಳದಲ್ಲಿ ಮೇ 6ರಂದು ಐದನೇ ಹಂತದ ಮತದಾನದ ಸಂದರ್ಭದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆದಿರುವ ಹಲವಾರು ಘಟನೆಗಳನ್ನು ಖಂಡಿಸಿರುವ ಎಡಿಟರ್ಸ್ ಗಿಲ್ಡ್, ಇಂತಹ ಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗ(ಇಸಿ)ವನ್ನು ಆಗ್ರಹಿಸಿದೆ.

ತೃಣಮೂಲ ಕಾರ್ಯಕರ್ತರು ನ್ಯೂಸ್X,ಎಬಿಪಿ ಆನಂದ ಮತ್ತು ಝೀ ನ್ಯೂಸ್ ಸೇರಿದಂತೆ ವಿವಿಧ ಮಾಧ್ಯಮ ಸಂಸ್ಥೆಗಳ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಗಿಲ್ಡ್ ಹೇಳಿಕೆಯಲ್ಲಿ ತಿಳಿಸಿದೆ.

ಪತ್ರಕರ್ತರು ರಾಜಕೀಯ ಪಕ್ಷಗಳಿಂದ ಹಲ್ಲೆಗೊಳಗಾಗದಂತೆ ಮತ್ತು ಅವರು ತಮ್ಮ ವೃತ್ತಿಪರ ಕರ್ತವ್ಯಗಳನ್ನು ಸುರಕ್ಷಿತವಾಗಿ ನಿರ್ವಹಿಸಲು ಸಾಧ್ಯವಾಗುವಂತೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವಂತೆ ಗಿಲ್ಡ್ ಪ.ಬಂಗಾಳ ಸರಕಾರಕ್ಕೆ ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News