ಲಾರಿ ಢಿಕ್ಕಿ: ಬೈಕ್ ಸವಾರ ಸಾವು
Update: 2019-05-07 23:01 IST
ಮೈಸೂರು,ಮೇ.7: ಬೈಕ್‍ಗೆ ಲಾರಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮೈಸೂರು-ಬೆಂಗಳೂರು ರಸ್ತೆಯ ಹಳೆ ಟೋಲ್‍ಗೇಟ್ ಜಂಕ್ಷನ್ ಬಳಿ ನಡೆದಿದೆ.
ಮೃತರನ್ನು ಶ್ರೀರಂಗಪಟ್ಟಣದ ನಿವಾಸಿ ನಂಜುಂಡಸ್ವಾಮಿ(45) ಎಂದು ಗುರುತಿಸಲಾಗಿದೆ. ಇವರು ಮೈಸೂರು-ಬೆಂಗಳೂರು ರಸ್ತೆಯ ಹಳೆ ಟೋಲ್‍ಗೇಟ್ ಜಂಕ್ಷನ್ ಬಳಿ ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಲಾರಿ ಚಾಲಕ ಜಂಕ್ಷನ್ ಬಳಿ ಬಲಕ್ಕೆ ತಿರುಗಿಸಿದಾಗ ಬೈಕ್‍ಗೆ ಢಿಕ್ಕಿಯಾಗಿದೆ. ಬೈಕ್‍ನಿಂದ ಕೆಳಗೆ ಬಿದ್ದ ನಂಜುಂಡಸ್ವಾಮಿ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಅವರು ಸಾವನ್ನಪ್ಪಿದ್ದಾರೆ.
ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.