ವೇಶ್ಯಾವಾಟಿಕೆ ದಂಧೆ: ಇಬ್ಬರ ಬಂಧನ, ಮಹಿಳೆಯರಿಬ್ಬರ ರಕ್ಷಣೆ
Update: 2019-05-08 19:59 IST
ಬೆಂಗಳೂರು, ಮೇ 8: ಅಪಾರ್ಟ್‌ಮೆಂಟ್‌ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಡಿ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಮಹಿಳೆಯರಿಬ್ಬರನ್ನು ರಕ್ಷಣೆ ಮಾಡಿದ್ದಾರೆ.
ನಗರದ ಭಟ್ರಹಳ್ಳಿಯ ಗಣೇಶ್ ಪ್ರಸಾದ್(29), ಸಾಮ್ರಾಟ್ ಎಂಬಾತ ಬಂಧಿತ ಆರೋಪಿಗಳೆಂದು ಸಿಸಿಬಿ ಡಿಸಿಬಿ ಎಸ್.ಗಿರೀಶ್ ತಿಳಿಸಿದ್ದಾರೆ. ಇಲ್ಲಿನ ಅಶ್ವಥನಗರದ ಎಚ್‌ಬಿಆರ್ ಲೇಔಟ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಹೊರ ರಾಜ್ಯದ ಮಹಿಳೆಯರಿನ್ನಿಟ್ಟು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆಂಬ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳಿಂದ 6 ಸಾವಿರ ರೂ. ನಗದು, ಎರಡು ಮೊಬೈಲ್ ಜಪ್ತಿ ಮಾಡಿಲಾಗಿದ್ದು, ಬಲವಂತವಾಗಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿದ್ದ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮಹಿಳೆಯರನ್ನು ವೇಶ್ಯಾವಾಟಿಕೆಯಿಂದ ಸಂರಕ್ಷಣೆ ಮಾಡಲಾಗಿದೆ.
ಈ ಸಂಬಂಧ ಆರೋಪಿಗಳ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ.