×
Ad

ಗ್ರಾ.ಪಂ. ಉಪಚುನಾವಣೆ: ಚುನಾವಣಾ ವೇಳಾಪಟ್ಟಿ ಪ್ರಕಟ

Update: 2019-05-08 21:07 IST

ಉಡುಪಿ, ಮೇ 8: ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳನ್ನು ಉಪ ಚುನಾವಣೆಯ ಮೂಲಕ ಭರ್ತಿ ಮಾಡಲು ರಾಜ್ಯ ಚುನಾವಣಾ ಆಯೋಗವು ನಿರ್ಧರಿಸಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅನ್ವಯ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.

ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಗ್ರಾಪಂ, ಕಾಪು ತಾಲೂಕಿನ ಮುದರಂಗಡಿ ಗ್ರಾಪಂ, ಕುಂದಾಪುರ ತಾಲೂಕಿನ ತಲ್ಲೂರು ಹಾಗೂ ಹಾಲಾಡಿ ಗ್ರಾಪಂಗಳಲ್ಲಿ ಖಾಲಿ ಇರುವ ತಲಾ 1 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.

ಚುನಾವಣಾ ಅಧಿಸೂಚನೆಯನ್ನು ಮೇ 13ರಂದು ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನ, ಮೇ 17ರಂದು ನಾಮಪತ್ರ ಗಳ ಪರಿಶೀಲನೆ ನಡೆಯಲಿದ್ದು, ಮೇ 20 ಉಮೇದುದಾರಿಕೆ ಹಿಂತೆಗೆದು ಕೊಳ್ಳಲು ಕೊನೆಯ ದಿನ. ಅಗತ್ಯವಿದ್ದರೆ ಮೇ 29ರಂದು ಮತದಾನ ನಡೆಯಲಿದೆ. ಮತ ಎಣಿಕೆಯು ಮೇ 31 ರಂದು ನಡೆಯಲಿದೆ. ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯಲ್ಲಿ ಮೇ 13ರಿಂದ 30ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News