ಅಕ್ಕರಂಗಡಿ: ಪಿಎಫ್‍ಐ ವತಿಯಿಂದ ರಮಝಾನ್ ಕಿಟ್ ವಿತರಣೆ

Update: 2019-05-09 13:57 GMT

ಬಂಟ್ವಾಳ, ಮೇ 9: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ರಮಝಾನ್ ಕಿಟ್ ವಿತರಣಾ ಕಾರ್ಯಕ್ರಮ ಅಕ್ಕರಂಗಡಿ ತಾಲೂಕು ಕಚೇರಿಯಲ್ಲಿ ಗುರುವಾರ ಜರಗಿತು. ಕಾರ್ಯಕ್ರಮದಲ್ಲಿ 1,28,300 ರೂ. ವೆಚ್ಚದಲ್ಲಿ 64 ಕಿಟ್‍ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಿಎಫ್‍ಐ ತಾಲೂಕು ಸಮಿತಿ ಅಧ್ಯಕ್ಷ ಇಜಾಝ್ ಅಹ್ಮದ್, ತಾಲೂಕು ಪ್ರಧಾನ ಕಾರ್ಯದರ್ಶಿ ಸಲೀಮ್ ಪರಂಗಿಫೇಟೆ, ಸಮಿತಿ ಸದಸ್ಯರಾದ ಇಸ್ಮಾಯಿಲ್ ಬಂಟ್ವಾಳ, ಶಬೀರ್ ರಹಿಮಾನ್ ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News