ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳ ಅವಧಿಪೂರ್ವ ಬಿಡುಗಡೆಗೆ ಸುಪ್ರೀಂ ಒಪ್ಪಿಗೆ

Update: 2019-05-09 14:22 GMT

ಹೊಸದಿಲ್ಲಿ, ಮೇ 9: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ 7 ಮಂದಿ ಆರೋಪಿಗಳ ಅವಧಿಪೂರ್ವ ಬಿಡುಗಡೆಗೆ ತಮಿಳುನಾಡು ಸರಕಾರ ತೆಗೆದುಕೊಂಡ ನಿರ್ಧಾರ ಆಕ್ಷೇಪಿಸಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.

1991ರಲ್ಲಿ ಶ್ರೀಪೆರಂಬದೂರಿನಲ್ಲಿ ರಾಜೀವ್ ಗಾಂಧಿ ಅವರೊಂದಿಗೆ ಮೃತಪಟ್ಟವರ ಸಂಬಂಧಿಕರು ಸಲ್ಲಿಸಿದ ಮನವಿಗೆ ಯಾವುದೇ ಅರ್ಹತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ, ಈ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದಿನ ಪೀಠ ನೀಡಿದ ತೀರ್ಪಿನಲ್ಲಿ ಎಲ್ಲ ಅಂಶಗಳು ಒಳಗೊಂಡಿವೆ. ಏನೂ ಉಳಿದುಕೊಂಡಿಲ್ಲ ಎಂದು ತಿಳಿಸಿದೆ. ಈ ಪ್ರಕರಣದ 7 ಮಂದಿ ಆರೋಪಿಗಳನ್ನು ಬಿಡುಗಡೆ ಮಾಡಲು ಆಗಿನ ಜಯಲಲಿತಾ ಸರಕಾರ 2014ರಲ್ಲಿ ನಿರ್ಧರಿಸಿತ್ತು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಶ್ರೀಪೆರಂಬದೂರಿನಲ್ಲಿ 1991 ಮೇ 21ರಂದು ಆತ್ಮಾಹುತಿ ಬಾಂಬ್ ದಾಳಿ ನಡೆಸಿ ಹತ್ಯೆಗೈಯಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News