ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಅಭಯ್ ಶ್ರೀನಿವಾಸ್ ಓಕಾ ಪ್ರಮಾಣ ವಚನ ಸ್ವೀಕಾರ

Update: 2019-05-10 14:53 GMT

ಬೆಂಗಳೂರು, ಮೇ 10: ಮುಂಬೈ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜ ಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಜೂ ಭಾಯಿ ವಾಲಾ ಅವರು ಅಭಯ್ ಶ್ರೀನಿವಾಸ್ ಓಕಾ ಅವರಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

ಈ ಮುನ್ನ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ್ ಭಾಸ್ಕರ್ ಅವರು ರಾಷ್ಟ್ರಪತಿ ಭವನದಿಂದ ಸ್ವೀಕತವಾದ ನೇಮಕಾತಿ ಅಧಿಸೂಚನೆಯನ್ನು ವಾಚಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ, ಬಿಹಾರ ಮತ್ತು ಜಾರ್ಖಂಡ್‌ನ ರಾಜ್ಯಪಾಲ ನ್ಯಾಯಮೂರ್ತಿ ಎಂ ರಾಮಾ ಜೋಯಿಸ್, ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ, ರಾಜ್ಯ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಧೀರೇಂದ್ರ ಹೀರಾಲಾಲ್ ವಘೇಲಾ, ರಾಜ್ಯ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತ ಎನ್.ಸಿ.ಶ್ರೀನಿವಾಸ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಕೆ ಜಿ.ನಾಗಲಕ್ಷ್ಮಿಬಾಯಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ರಮೇಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಶಿಷ್ಟಾಚಾರ ವಿಭಾಗದ ಉಪ ಕಾರ್ಯದರ್ಶಿ ವಿಜಯ್ ಮಹಾಂತೇಶ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರೂ ಹಾಗೂ ಮಹಾ ನಿರೀಕ್ಷಕರೂ ಆದ ನೀಲಮಣಿ ಎನ್. ರಾಜು, ಬೆಂಗಳೂರು ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News