ತುಳುಕೂಟದಿಂದ ಜಯಕರ ಶೆಟ್ಟರಿಗೆ ಅಭಿನಂದನೆ
Update: 2019-05-10 22:25 IST
ಉಡುಪಿ, ಮೇ 10: ಉಡುಪಿ ತುಳುಕೂಟದ ಕಾರ್ಯಕಾರಿ ಸಮಿತಿ ಸಭೆಯು ಬುಧವಾರ ಉಡುಪಿಯ ಜಗನ್ನಾಥ ಸಭಾಭವನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್‌ನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ, ತುಳುಕೂಟ ಉಡುಪಿಯ ಗೌರವಾಧ್ಯಕ್ಷರೂ ಆಗಿರುವ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಕಾರ್ಯಕಾರಿ ಸಮಿತಿಯ ಪರವಾಗಿ ಗೌರವಿಸಿ ಅಭಿನಂದನೆ ಸಲ್ಲಿಸಲಾಯಿತು.
ತುಳುಕೂಟದ ಅಧ್ಯಕ್ಷ ವಿ.ಜಿ.ಶೆಟ್ಟಿ ಅವರು ಜಯಕರ ಶೆಟ್ಟಿ ಅವರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ತುಳುಕೂಟದ ಉಪಾಧ್ಯಕ್ಷರಾದ ಲಕ್ಷ್ಮೀಕಾಂತ್ ಬೆಸ್ಕೂರ್, ವಿದ್ಯಾ ರಮೇಶ, ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಿದಿಯೂರು, ಕೋಶಾಧಿಕಾರಿ ಚೈತನ್ಯ ಎಂ.ಜಿ. ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.