×
Ad

ಮೇ 29ಕ್ಕೆ ಆನೇಕಲ್ ಪುರಸಭೆ ಚುನಾವಣೆ: ಹೆಬ್ಬಗೋಡಿ ವಾರ್ಡ್ ಸಂಖ್ಯೆ 26ಕ್ಕೂ ಮತದಾನ

Update: 2019-05-10 22:26 IST

ಬೆಂಗಳೂರು, ಮೇ 10: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪುರಸಭೆಗೆ ಮೇ 29ರಂದು ಚುನಾವಣೆ ನಡೆಯಲಿದೆ. ಅಲ್ಲದೆ, ಅದೇ ದಿನ ಹೆಬ್ಬಗೋಡಿ ನಗರ ಸಭೆಯ ವಾರ್ಡ್ ಸಂಖ್ಯೆ- 26ಕ್ಕೂ ಮತದಾನ ನಡೆಯಲಿದೆ ಎಂದು ವೇಳಾಪಟ್ಟಿ ಪ್ರಕಟಿಸಲಾಗಿದೆ.

ನಾಳೆ(ಮೇ 11)ಯಿಂದ ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 3ಗಂಟೆಯ ವರೆಗೆ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಸಲ್ಲಿಸಲು ಮೇ 16 ರಂದು ಕೊನೆಯ ದಿನವಾಗಿದೆ. ಮೇ 17ರ ಬೆಳಗ್ಗೆ 11ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಮೇ 20 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕವಾಗಿದ್ದು, ಅಂದು ಮಧ್ಯಾಹ್ನ 3ಗಂಟೆಯೊಳಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಮೇ 29ರಂದು ಬೆಳಗ್ಗೆ 7ಗಂಟೆಯಿಂದ ಸಂಜೆ 5ಗಂಟೆಯ ವರೆಗೆ ಮತದಾನ ನಡೆಯಲಿದೆ.

ಮರು ಮತದಾನದ ಅವಶ್ಯಕತೆ ಇದ್ದಲ್ಲಿ, ಮೇ 30ರಂದು ನಡೆಸಲಾಗುವುದು. ಮೇ 31ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯ್ ಶಂಕರ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News