ಉಡುಪಿ: ಶ್ರೀಭಗೀರಥ ಜಯಂತಿ ಆಚರಣೆ
Update: 2019-05-11 18:03 IST
ಉಡುಪಿ, ಮೇ 11: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಶ್ರೀಭಗೀರಥ ಜಯಂತಿ ಕಾರ್ಯ ಕ್ರಮ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ಮಹನೀಯರ ಜಯಂತಿಗಳನ್ನು ಆಚರಿಸುವುದರ ಮೂಲಕ ಅವರ ತತ್ವ ಆದರ್ಶಗಳನ್ನು, ಇಂದಿನ ಪೀಳಿಗೆ ಸ್ಪೂರ್ತಿಯಾಗಿ ಬಳಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಉಪಸ್ಥಿತರಿದ್ದರು. ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ ಸ್ವಾಗತಿಸಿದರು. ಜಾನಪದ ಕಲಾವಿದ ಶಂಕರದಾಸ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.