ಕುಡಿಯುವ ನೀರಿನ ಸಮಸ್ಯೆ: ದೂರು ಸಲ್ಲಿಕೆಗೆ ಕಾಲ್‌ಸೆಂಟರ್ ನೆರವು- ಸಚಿವ ಕೃಷ್ಣಭೈರೇಗೌಡ

Update: 2019-05-11 12:44 GMT

ಬೆಂಗಳೂರು: ಮೇ 11: ರಾಜ್ಯದಲ್ಲಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತಂತೆ ಬರುವ ದೂರುಗಳಿಗೆ ತಕ್ಷಣವೇ ಸ್ಪಂದಿಸುವಂತೆ ಎಲ್ಲ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆಗಳಿಗೆ ಸಂಬಂಧಪಟ್ಟ ಹಾಗೆ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಕಾಲ್ ಸೆಂಟರ್‌ಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡಿ ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ. ಈ ದೂರುಗಳ ಬಗ್ಗೆ ತಕ್ಷಣವೇ ಸ್ಥಳೀಯ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಕೃಷ್ಣಭೈರೇಗೌಡ ಹೇಳಿದ್ದಾರೆ.

ಕಾಲ್ ಸೆಂಟರ್ ವಿವರಗಳನ್ನು ಒದಗಿಸಲಾಗಿದೆ. ಕಾಲ್‌ಸೆಂಟರ್‌ಗಳ ದೂರವಾಣಿ ಸಂಖ್ಯೆಗಳನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವೆಬ್ ಸೈಟ್ ಪ್ರಕಟಿಸಿದ್ದು, ಆಸಕ್ತರು ಇಲಾಖೆಯ rdpr.kar.nic.in ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಕೃಷ್ಣಭೈರೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News