ಗುರುಗ್ರಾಮದಲ್ಲಿ ಮತದಾನ ಮಾಡಿದ ವಿರಾಟ್ ಕೊಹ್ಲಿ
Update: 2019-05-12 11:23 IST
ಹೊಸದಿಲ್ಲಿ, ಮೇ 12: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ರವಿವಾರ ಹರ್ಯಾಣದ ಗುರುಗ್ರಾಮದಲ್ಲಿರುವ ಮತಗಟ್ಟೆಗೆ ತೆರಳಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ಇದೇ ವೇಳೆ, ಪೂರ್ವ ದಿಲ್ಲಿಯ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ದಿಲ್ಲಿಯ ಹಳೆ ರಾಜಿಂದರ್ ನಗರದಲ್ಲಿರುವ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು. ಗಂಭೀರ್ ಆಮ್ ಆದ್ಮಿ ಪಕ್ಷದ ಅತಿಶಿ ಹಾಗೂ ಕಾಂಗ್ರೆಸ್‌ನ ಅರ್ವಿಂದರ್ ಸಿಂಗ್ ಲವ್ಲಿ ವಿರುದ್ಧ ಸೆಣಸಾಡುತ್ತಿದ್ದು, ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಎದುರಿಸುತ್ತಿದ್ದಾರೆ.
ರವಿವಾರ ದಿಲ್ಲಿ, ಹರ್ಯಾಣ ಸಹಿತ ದೇಶದ 7 ರಾಜ್ಯಗಳ 59 ಕ್ಷೇತ್ರಗಳಲ್ಲಿ ಆರನೇ ಹಂತದ ಮತದಾನ ನಡೆಯುತ್ತಿದೆ.