×
Ad

ಪಲಿಮಾರು ಮಠದ 32ನೆ ಯತಿಯಾಗಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ ಪಟ್ಟಾಭಿಷೇಕ

Update: 2019-05-12 15:41 IST

ಉಡುಪಿ: ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ಸನ್ಯಾಸ ಆಶ್ರಮ ಸ್ವೀಕರಿಸಿದ ನೂತನ ಯತಿಗಳಿಗೆ ಪರ್ಯಾಯ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಇಂದು ಮಧ್ಯಾಹ್ನ 12.20ರ ಸುಮಾರಿಗೆ ಶ್ರೀಕೃಷ್ಣಮಠದ ಸರ್ವಜ್ಞ ಪೀಠದಲ್ಲಿ ಪಟ್ಟಾಭಿಷೇಕ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ನೂತನ ಯತಿಗೆ ಪಲಿಮಾರು ಮಠದ 32ನೇ ಯತಿಗಳಾಗಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ ಎಂದು ನಾಮಕರಣ ಮಾಡಲಾಯಿತು.

ಪಟ್ಟಾಭಿಷೇಕದ ಪ್ರಯುಕ್ತ ಕೃಷ್ಣ ಮಠದಲ್ಲಿ ಬೆಳಗ್ಗೆ ತತ್ವ ಹೋಮ ಹಾಗೂ ಅಷ್ಟ ಮಹಾ ಮಂತ್ರಗಳ ಹೋಮ ನಡೆಯಿತು. ಈ ಸಂದರ್ಭ ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ, ಕೃಷ್ಣಾಪುರ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿ, ಅದಮಾರು ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ, ಪೇಜಾವರ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕಾಣಿಯೂರು ಶ್ರೀವಿದ್ಯಾವಲ್ಲಭತೀರ್ಥ ಸ್ವಾಮೀಜಿ, ಸುಬ್ರಹ್ಮಣ್ಯ ಮಠಾಧೀಶ ಶ್ರೀವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ, ಸೋದೆ ಶ್ರೀವಿಶ್ವವಲ್ಲಭತೀರ್ಥ ಸ್ವಾಮೀಜಿ, ಭೀಮನಕಟ್ಟೆ ಮಠಾಧೀಶ ಶ್ರೀರಘುವರೇಂದ್ರತೀರ್ಥ ಸ್ವಾಮೀಜಿ, ಅದಮಾರು ಕಿರಿಯ ಯತಿ ಶ್ರೀಈಶಪ್ರಿಯತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.

ಧಾರ್ಮಿಕ ಕಾರ್ಯಕ್ರಮಗಳನ್ನು ವಿದ್ವಾಂಸ ಸುಬ್ರಹ್ಮಣ್ಯ ಭಟ್ ಗುಂಡಿಬೈಲ್ ನಡೆಸಿಕೊಟ್ಟರು. ಪರ್ಯಾಯ ಮಠದ ದಿವಾನ ವೇದವ್ಯಾಸ ತಂತ್ರಿ, ಕಂಬ್ಲಕಟ್ಟ ಸುರೇಂದ್ರ ಉಪಾದ್ಯಾಯ, ಕಂಬ್ಲಕಟ್ಟ ಉಪಾದ್ಯಾಯ ಮೊದಲಾದವರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News