×
Ad

ಮೇ 23ರ ನಂತರ ಕಾಂಗ್ರೆಸ್ ಇಬ್ಬಾಗ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್

Update: 2019-05-12 17:34 IST

ಕಲಬುರಗಿ, ಮೇ 12: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್‌ನಲ್ಲಿ ಅಮೂಲಾಗ್ರ ಬದಲಾವಣೆಯಾಗಲಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಾ.ಪರಮೇಶ್ವರ್ ನೇತೃತ್ವದಲ್ಲಿ ಪಕ್ಷ ಇಬ್ಬಾಗವಾಗಲಿದೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಭವಿಷ್ಯ ನುಡಿದಿದ್ದಾರೆ.

ರವಿವಾರ ಚಿಂಚೋಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೇ 23ರ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಭೂಕಂಪ ಆಗುವುದು ನಿಶ್ಚಿತ. ಬಿಎಸ್‌ವೈ ಮುಖ್ಯಮಂತ್ರಿ ಆಗಲಿಲ್ಲವೆಂದು ರಾಜ್ಯದ ಜನತೆ ಕಣ್ಣೀರಿಡುತ್ತಿದ್ದಾರೆ ಎಂದು ಹೇಳಿದರು.

ಮೇ 23ರ ಬಳಿಕ ಮೈತ್ರಿ ಸರಕಾರ ಪತನಗೊಳ್ಳಲಿದ್ದು, ಕಾಂಗ್ರೆಸ್ ಪಕ್ಷದ 20ಕ್ಕೂ ಹೆಚ್ಚು ಶಾಸಕರು ಸ್ವಯಂ ಪ್ರೇರಿತರಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದು, ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ಚಿಂಚನಸೂರ್ ಹೇಳಿದರು.

ಚಿಂಚೋಳಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಗೆಲುವು ನಿಶ್ಚಿತ. ಕ್ಷೇತ್ರದಲ್ಲಿ ಬಿಜೆಪಿ ಪರವಾದ ಅಲೆ ಇದೆ ಎಂದು ಚಿಂಚನಸೂರು ಹೇಳಿದರು. ಮಾಜಿ ಸಚಿವ ವಿ.ಸೋಮಣ್ಣ, ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್, ಸುನಿಲ್ ವಲ್ಯಾಪುರೆ, ಅಮರನಾಥ ಪಾಟೀಲ ಈ ವೇಳೆ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News