×
Ad

ಪಾರದರ್ಶಕ ಆಡಳಿತ ಮಂಡಳಿಯಿಂದ ಸಂಸ್ಥೆ ಬೆಳವಣಿಗೆ ಸಾಧ್ಯ: ಪ್ರವೀಣ್ ನಾಯಕ್

Update: 2019-05-12 18:24 IST

ಉಡುಪಿ, ಮೇ 12: ಪಾರದರ್ಶಕವಾಗಿ ವ್ಯವಹಾರ ನಡೆಸುವ ಆಡಳಿತ ಮಂಡಳಿ ಮತ್ತು ನಮ್ಮ ಸಂಸ್ಥೆ ಎಂಬ ಹೆಮ್ಮೆ ಹಾಗೂ ವಿಶ್ವಾಸದಿಂದ ಕೆಲಸ ಮಾಡುವ ಸಿಬ್ಬಂದಿ ವರ್ಗ ಹೊಂದಿರುವ ಸಂಸ್ಥೆಯ ಬೆಳವಣಿಗೆಯನ್ನು ತಡೆ ಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್ ಹೇಳಿದ್ದಾರೆ.

ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ರವಿರಾ ನಡೆದ ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಗ್ರಾಹಕರ ಸಮಾವೇಶ ದಲ್ಲಿ ಅವರು ಮಾತನಾಡುತಿದ್ದರು.

ಬಡಗಬೆಟ್ಟು ಸೊಸೈಟಿಯು ಉಡುಪಿ ನಗರದ ಬೆಳವಣಿಗೆಗೆ ಮಹತ್ವದ ಕೊಡುಗೆಯನ್ನು ನೀಡಿದೆ. ಗ್ರಾಹಕರಿಂದಾಗಿ ಈ ಸಂಸ್ಥೆಯು ಇಷ್ಟು ಎತ್ತರಕ್ಕೆ ಬೆಳೆಯಲು ಸಾಧ್ಯವಾಗಿದೆ ಎಂದು ಅವರು ತಿಳಿಸಿದರು.

ಸಮಾವೇಶವನ್ನು ಉದ್ಘಾಟಿಸಿದ ಉಡುಪಿ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಜೈಶಂಕರ್ ಮಾತನಾಡಿ, ಬಡಗಬೆಟ್ಟು ಸೊಸೈಟಿಯು ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಸಾರ್ವಜನಿಕರಿಗೆ ಬಹಳಷ್ಟು ಅನುಕೂಲ ಮಾಡಿ ಕೊಡಲಿ ಎಂದು ಹಾರೈಸಿದರು.

ಕುಂದಾಪುರ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಚಂದ್ರ ಪ್ರತಿಮಾ, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಜ್ಯೋತಿಷಿ ಕಬ್ಯಾಡಿ ಜಯರಾಮ ಆಚಾರ್ಯ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಅಶೋಕ್ ಕುಮಾರ್ ಶೆಟ್ಟಿ, ಶತಮಾನೋತ್ಸವ ಸಮಿತಿಯ ಸಂಚಾಲಕ ಪುರುಷೋತ್ತಮ ಪಿ.ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.

ಈ ಸಂದರ್ಭದಲ್ಲಿ ಜೆಸಿಐ ರಾಷ್ಟ್ರೀಯ ತರಬೇತುದಾರ ಸುಧಾಕರ ಪೂಜಾರಿ ಕಾರ್ಕಳ ಗ್ರಾಹಕರ ಜಾಗೃತಿ, ಮಾಹಿತಿ, ಸಂವಾದ ಕಾರ್ಯಕ್ರಮ ವನ್ನು ನಡೆಸಿ ಕೊಟ್ಟರು. ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದಾ್ರಳಿ ಪ್ರಾಸ್ತಾ ವಿಕವಾಗಿ ಮಾತನಾಡಿದರು.

ಸೊಸೈಟಿ ಅಧ್ಯಕ್ಷ ಸಂಜೀವ ಕಾಂಚನ್ ಸ್ವಾಗತಿಸಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಎಸ್. ವಂದಿಸಿದರು. ಸಮರ್ಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News