ಜಮ್ಮುಕಾಶ್ಮೀರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರು ಹತ

Update: 2019-05-12 14:57 GMT
ಸಾಂದರ್ಭಿಕ ಚಿತ್ರ

ಶ್ರೀನಗರ, ಮೇ 12: ಜಮ್ಮು ಹಾಗೂ ಕಾಶ್ಮೀರದ ಶೋಪಿಯಾನದಲ್ಲಿ ರವಿವಾರ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆ ರವಿವಾರ ಬೆಳಗ್ಗೆ ಹೆಂಡ್-ಸೀತಾಪುರ ಪ್ರದೇಶವನ್ನು ಬೆಳಗ್ಗೆ ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆ ಸಂದರ್ಭ ಅಡಗಿ ಕುಳಿತಿದ್ದ ಉಗ್ರರು ಗುಂಡಿ ನ ದಾಳಿ ನಡೆಸಿದರು. ಭದ್ರತಾ ಪಡೆ ಸಮರ್ಥವಾಗಿ ಪ್ರತಿದಾಳಿ ನಡೆಸಿತು ಎಂದು ಪೊಲೀಸ್ ವಕ್ತಾರ ಮನೋಜ್ ಕುಮಾರ್ ಹೇಳಿದ್ದಾರೆ. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಎನ್‌ಕೌಂಟರ್ ನಡೆಸಿದ ಸ್ಥಳದಲ್ಲಿ ಉಗ್ರರ ಮೃತದೇಹ ಪತ್ತೆಯಾಗಿದೆ. ಗುಂಡಿನ ಚಕಮಕಿ ಸಂದರ್ಭ ಬೇರೆ ಯಾವುದೇ ಹಾನಿ ಆದ ಬಗ್ಗೆ ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News