ರೈಲಿನಿಂದ ಬಿದ್ದು ಮೃತ್ಯು

Update: 2019-05-12 16:20 GMT

ಬೈಂದೂರು, ಮೇ 12: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸುಮಾರು 65 ರಿಂದ 75ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಾವುಂದ ಬಾಂಗ್ ರೈಲ್ವೆ ಸೇತುವೆ ಬಳಿ ಮೇ 11ರಂದು ಸಂಜೆ ವೇಳೆ ನಡೆದಿದೆ.

ಮೃತರು ಧರಿಸಿದ ಬಟ್ಟೆಯಲ್ಲಿ ಮಂಗಳೂರಿನಿಂದ ಕಾರವಾರಕ್ಕೆ ಹೊಗುವ ರೈಲ್ವೇ ಟಿಕೇಟ್ ಪತ್ತೆಯಾಗಿದ್ದು, ಈ ವ್ಯಕ್ತಿಯು ಮಂಗಳೂರಿನಿಂದ ಕಾರವಾರಕ್ಕೆ ಹೋಗುವ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನ ಲಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News