ಬೆಂವಿವಿ ಪ್ರತಿಮೆ ವಿವಾದ: ರಾಜ್ಯಪಾಲರಿಗೆ ದೂರು

Update: 2019-05-12 16:49 GMT

ಬೆಂಗಳೂರು, ಮೇ 12: ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಬುದ್ಧ ಹಾಗೂ ಸರಸ್ವತಿ ಪ್ರತಿಮೆಗಳನ್ನು ಸ್ಥಾಪಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕುಲಪತಿ ಕೆ.ಆರ್.ವೇಣುಗೋಪಾಲ್ ರಾಜ್ಯಪಾಲರಿಗೆ ವರದಿ ಸಲ್ಲಿಸಿದ್ದಾರೆ.

ಪ್ರತಿಮೆಗಳಿಗೆ ಸಂಬಂಧಿಸಿದ ವಿವಾದಕ್ಕೆ ಬೆಂವಿವಿಯ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಬಿ.ಸಿ.ಮೈಲಾರಪ್ಪ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗದ ಮುಖ್ಯಸ್ಥ ಟಿ.ಎಸ್.ಮೂರ್ತಿ ಅವರು ಪ್ರತಿಹೊಣೆಗಾರರು ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಬುದ್ಧ ಹಾಗೂ ಸರಸ್ವತಿ ಪ್ರತಿಮೆಗಳನ್ನು ಅಕ್ಕಪಕ್ಕದಲ್ಲಿ ಕೂರಿಸುವ ನಿರ್ಣಯ ತೆಗೆದುಕೊಳ್ಳಲಾಗಿದ್ದು, ವಿವಾದವನ್ನು ತಣ್ಣಗೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ವರದಿಯನ್ನು ಕುಲಪತಿ ಕೆ.ಆರ್.ವೇಣುಗೋಪಾಲ್ ಅವರು, ಉನ್ನತ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಸಚಿವ, ರಾಜ್ಯ ಹಾಗೂ ಪೊಲೀಸ್ ಕಮಿಷನರ್‌ಗೆ ಕಳುಹಿಸಿಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News