ಬರ ಪರಿಸ್ಥಿತಿ: ಮೇ 15ಕ್ಕೆ ಮುಖ್ಯಮಂತ್ರಿ ವಿಡಿಯೋ ಕಾನ್ಫರೆನ್ಸ್
Update: 2019-05-13 19:37 IST
ಬೆಂಗಳೂರು, ಮೇ 13: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೇ 15ರಂದು ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಫ್ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ಅವರು ಅಧಿಕಾರಿಗಳೊಂದಿಗೆ ಬರ ಪೀಡಿತ ಪ್ರದೇಶಗಳ ಕುಡಿಯುವ ನೀರಿನ ವ್ಯವಸ್ಥೆ, ಉದ್ಯೋಗ ಒದಗಿಸುವುದು, ಜಾನುವಾರುಗಳಿಗೆ ಮೇವು ಲಭ್ಯತೆ, ಗೋಶಾಲೆ ಹಾಗೂ ಮೇವು ಬ್ಯಾಂಕ್, ಉದ್ಯೋಗ ಸೃಜನೆ ಕಾಮಗಾರಿಗಳ ಪ್ರಗತಿ ಕುರಿತು ಚರ್ಚಿಸಲಿದ್ದಾರೆಂದು ತಿಳಿಸಲಾಗಿದೆ.