×
Ad

ಐಪಿಎಲ್ ಬೆಟ್ಟಿಂಗ್: ಓರ್ವ ಸೆರೆ, 70 ಲಕ್ಷ ರೂ. ನಗದು ಜಪ್ತಿ

Update: 2019-05-13 19:56 IST

ಬೆಂಗಳೂರು, ಮೇ 13: ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ, 70,33,400 ರೂ. ನಗದು ವಶಪಡಿಸಿಕೊಂಡಿದ್ದಾರೆ.

ನಗರದ ಪಿಳ್ಳಣ್ಣ ಗಾರ್ಡನ್‌ನ ಚಾಂದ್ ಪಾಷಾ(25) ಬಂಧಿತ ಆರೋಪಿ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.

ಕೋರಮಂಗಲ 3ನೇ ಬ್ಲಾಕ್‌ನ ಮನೆಯಲ್ಲಿ ಮೇ 12 ರಂದು ನಡೆದ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ತಂಡಗಳ ಸೋಲು ಮತ್ತು ಗೆಲುವಿನ ಬಗ್ಗೆ ಸಾರ್ವಜನಿಕರಿಂದ ಮೊಬೈಲ್ ಫೋನ್ ಮೂಲಕ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಮೋಸ ಮಾಡಿರುತ್ತಾನೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಈತನಿಂದ ಕ್ರಿಕೆಟ್ ಬೆಟ್ಟಿಂಗ್‌ಗೆ ಸಂಬಂಧಿಸಿದ 70,33,400 ರೂ. ನಗದು ಹಾಗೂ 2 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಆರೋಪಿ ವಿರುದ್ದ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಬುಕ್ಕಿ ಸೈಯ್ಯದ್ ಇಲ್ಯಾಝ್ ಎಂಬುವನು ತಲೆಮರೆಸಿಕೊಂಡಿದ್ದು, ಈತನ ಪತ್ತೆಕಾರ್ಯ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News