ಎಲ್ಪಿಜಿ ದರ ವ್ಯತ್ಯಾಸದ ಬಗ್ಗೆ ಸ್ಪಷ್ಟಣೆ
Update: 2019-05-13 20:52 IST
ಮಂಗಳೂರು, ಮೇ 13: ಎಲ್‌ಪಿಜಿ ದರವನ್ನು ಎಚ್‌ಪಿ ಕಂಪೆನಿಯು ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಮಾರಾಟ ಗಾರರದಿಂದ ಯಾವುದೇ ಅವ್ಯವಹಾರ ನಡೆದಿಲ್ಲ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾದ ವಿಚಾರವಾಗಿದೆ ಎಂದು ಮ್ಯಾಕೋ ಕೋ-ಅಪರೇಟಿವ್ ಸೊಸೈಟಿ ಸ್ಪಷ್ಪಪಡಿಸಿದೆ.
ದರ ವ್ಯತ್ಯಾಸದ ಬಗ್ಗೆ ಕಂಪೆನಿಯ ಮಂಗಳೂರಿನ ಅಧಿಕಾರಿಗಳೊಂದಿಗೆ ಆಟೋ ರಿಕ್ಷಾ ಚಾಲಕರ ಮುಖಂಡರು ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಕಂಪೆನಿಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಮಸ್ಯೆಯನ್ನು ಶೀಘ್ರ ಬಗೆಹರಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ ಎಂದು ಮ್ಯಾಕೋ ಪ್ರಕಟನೆಯಲ್ಲಿ ತಿಳಿಸಿದೆ.