ಮೇ 17: ಅಭಿನಂದನಾ ಕಾರ್ಯಕ್ರಮ
Update: 2019-05-13 20:56 IST
ಮಂಗಳೂರು, ಮೇ 13: ಪ್ರಸಕ್ತ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತುಳು ಪಠ್ಯವನ್ನು ಆಯ್ಕೆ ಮಾಡಿಕೊಂಡು ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.ನೂರು ಫಲಿತಾಂಶ ದಾಖಲಿಸಿರುವುದರ ಹಿನ್ನೆಲೆಯಲ್ಲಿ 100 ಅಂಕ ಗಳಿಸಿರುವ ವಿದ್ಯಾರ್ಥಿಗಳು, ಉತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಹಾಗೂ ಶಾಲಾ ಮುಖ್ಯಸ್ಥರನ್ನು ಅಭಿನಂದಿಸುವ ಸಲುವಾಗಿ ಅಕಾಡಮಿಯ ವತಿಯಿಂದ ಉಪ್ಪಿನಂಗಡಿಯ ಶ್ರೀಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸಹಕಾರದೊಂದಿಗೆ ದೇವಸ್ಥಾನದ ಸಭಾಭವನದಲ್ಲಿ ಮೇ 17ರಂದು ಬೆಳಗ್ಗೆ 10 ಗಂಟೆಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.