ಶಿಕ್ಷಕರ ವರ್ಗಾವಣೆಗೆ ಮೇ 20ರಿಂದ ಕೌನ್ಸಿಲಿಂಗ್ ಸಾಧ್ಯತೆ

Update: 2019-05-13 16:38 GMT

ಬೆಂಗಳೂರು, ಮೇ 13: ವಿವಿಧ ಕಾರಣಗಳಿಗಾಗಿ 2017ರಿಂದ ನೆನೆಗುದಿಗೆ ಬಿದ್ದಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಇದೀಗ ಕಾಲ ಕೂಡಿ ಬಂದಿದ್ದು, ಮೇ 20ರಿಂದ ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಉದ್ದೇಶಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯನ್ನು ತಮ್ಮ ಬಳಿಯೆ ಇಟ್ಟುಕೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವರ್ಗಾವಣೆ ಪ್ರಕ್ರಿಯೆಗೆ ಸಮ್ಮತಿ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ. ರಾಜ್ಯದಲ್ಲಿರುವ 1.50ಲಕ್ಷ ಪ್ರಾಥಮಿಕ ಹಾಗೂ 45 ಸಾವಿರ ಪ್ರೌಢಶಾಲೆ ಶಿಕ್ಷಕರ ಪೈಕಿ ಶೇ.25ರಷ್ಟು ಮಂದಿ ವರ್ಗಾವಣೆ ನಿರೀಕ್ಷೆಯಲ್ಲಿ ಇದ್ದಾರೆ ಎಂದು ಗೊತ್ತಾಗಿದೆ.

ಶಿಕ್ಷಕರ ವರ್ಗಾವಣೆ ತಿದ್ದುಪಡಿ ಕಾಯ್ದೆಯನ್ವಯ ಮಾರ್ಗಸೂಚಿಗಳನ್ನು ರೂಪಿಸಿ ನಂತರ, ವರ್ಗಾವಣೆಗೆ ಅಧಿಸೂಚನೆ ಹೊರಡಿಸುವಂತೆ ಸಿಎಂ ಕುಮಾರಸ್ವಾಮಿ ಸಮ್ಮತಿಸಿ ಸೂಚಿಸಿದ್ದು, ಶೀಘ್ರದಲ್ಲೆ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News