ಓದುತ್ತಿದ್ದ ವೇಳೆ ಕುಸಿದು ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವು

Update: 2019-05-13 17:03 GMT

ಮೈಸೂರು,ಮೇ.13: ಎಂಬಿಎ ವಿದ್ಯಾರ್ಥಿನಿಯೊಬ್ಬರು ಮನೆಯಲ್ಲಿ ಓದುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದಿದೆ.

ಸರಸ್ವತಿಪುರಂ ನಿವಾಸಿ ಬಾವನಾ(23) ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ. ಇವರು ಎಂಬಿಎ ವ್ಯಾಸಾಂಗ ಮಾಡುತ್ತಿದ್ದು, ರವಿವಾರ ಸಂಜೆ ಮನೆಯಲ್ಲೇ ಕುಳಿತು ಓದುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಅವರ ತಾತ ಸರಸ್ವತಿಪುರಂ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News