×
Ad

​ಪರಿಸರದ ಸಂರಕ್ಷಣೆಯೊಂದಿಗೆ ಪ್ರವಾಸೋದ್ಯಮ ಅಭಿವೃದ್ಧಿ - ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

Update: 2019-05-13 22:55 IST

ಮಂಗಳೂರು, ಮೇ 13: ನಗರದಲ್ಲಿ ವಾಸಯೋಗ್ಯ ಪರಿಸರದ ಸಂರಕ್ಷಣೆಯೊಂದಿಗೆ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳುವ ಗುರಿ ಇದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ನಗರದ ತಣ್ಣೀರು ಬಾವಿ ಬೀಚ್‌ನಲ್ಲಿಂದು ದಕ್ಷಿಣ ಕನ್ನಡ ಪತ್ರಕರ್ತರ ಸಂಘ, ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳು ಎಂಬ ಮಾದ್ಯಮ ಸಂವಾದಗೊಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ದ.ಕ ಜಿಲ್ಲೆ ರಾಜ್ಯದಲ್ಲೇ ಅತ್ಯಂತ ಸುಂದರವಾದ ಪ್ರಾಕೃತಿಕ ಸೌಂದರ್ಯವನ್ನು ಹೊಂದಿದ ಜಿಲ್ಲೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಿಂದ ಹೊರ ಪ್ರದೇಶಗಳಿಗೆ ಹೋದವರು ಮರಳಿ ಜಿಲ್ಲೆಯತ್ತ ಬರುತ್ತಿದ್ದಾರೆ. ಜಿಲ್ಲೆಯ ಪ್ರಾಚೀನ ಪರಂಪರೆ ಮತ್ತು ಜನ ಜೀವನಕ್ಕೆ ಹೊಂದಿಕೊಂಡಂತೆ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಚಿಂತನೆ ಇದೆ ಇದರ ಒಂದು ಅಂಗವಾಗಿ ನದಿ ಉತ್ಸವನ್ನು ನಡೆಸಲಾಯಿತು. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ದೊಡ್ಡ ಯೋಜನೆಗಳನ್ನು ಹಮ್ಮಿಕೊಳ್ಳುವ ಬದಲು ಚಿಕ್ಕ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಸೂಕ್ತವಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ :- ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸಲಾಗುವುದು. ಯೋಜನೆಯ ಮೂಲಕ ಹಳೆ ಬಂದರಿನಿಂದ ನೇತ್ರಾವತಿ ಸೇತುವೆಯವರೆಗಿನ ಕಾರಿಡರ್, ಕೂಳೂರು ಸೇತುವೆಯ ಬಳಿಯ ಜಿಲ್ಲೆಯಲ್ಲಿ ಸರಕಾರೇತರ ಸಂಸ್ಥೆಗಳ ಹೂಡಿಕೆ ಯೊಂದಿಗೆ ಪ್ರವಾಸೋದ್ಯಮ,ನಗರದ ಜನವಸತಿಗೆ ಪೂರಕವಾದ ವಾಣಿಜ್ಯ ಪ್ರವಾಸದ್ಯೋಮ ಅಭಿವೃದ್ಧಿಯ ಗುರಿ ಇದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಜೆಟ್ಟಿ ನಿರ್ಮಾಣದಿಂದ ಅಭಿವೃದ್ದಿ:- ನಗರದ ತೀರ ಪ್ರದೇಶದಲ್ಲಿ ನಾಲ್ಕು ಜೆಟ್ಟಿಗಳನ್ನು ನಿರ್ಮಿಸುವ ಮೂಲಕ ಜಲಸಂಪನ್ಮೂಲವನ್ನು ಬಳಸಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬಹುದು.ಈ ಬಗ್ಗೆ ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲೆಯ ಪ್ರವಾಸೋದ್ಯಮ, ಅಭಿವೃದ್ದಿಗೆ ಎಲ್ಲರ ಸಹಭಾಗಿತ್ವ ಮುಖ್ಯ ರಾಜಕೀಯ ಇಚ್ಛಾ ಶಕ್ತಿಯೂ ಮುಖ್ಯ .ಜಿಲ್ಲೆಯ ಪ್ರವಸೋದ್ಯಮ ಅಬಿವೃದ್ಧಿಗೆ ಇನ್ನೂ ತೀವ್ರಗತಿಯ ನೀಡಲು ಸಮಿಯೊಂದನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಸಮಾರಂಭದ ವೇದಿಕೆಯಲ್ಲಿ ಪತ್ರಕರ್ತರ ಸಂಗದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ವಲಯಾರಣ್ಯಾಧಿಕಾರಿ ಶ್ರೀಧರ್,ಪತ್ರಕರ್ತರ ಸಂಘದ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News