ನಾನು ಮತ್ತೆ ಸಿಎಂ ಆಗಬಾರದಾ ? : ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ

Update: 2019-05-14 06:27 GMT

ಹುಬ್ಬಳ್ಳಿ, ಮೇ 14: ನಾನು ಮತ್ತೆ ಸಿಎಂ ಆಗಬಾರದಾ  ?  ಜನರು ಬಯಸಿದರೆ ಸಿಎಂ ಆಗುವುದರಲ್ಲಿ ತಪ್ಪೇನಿದೆ  ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದೇನೆ.ಜನರು ಆಶೀರ್ವಾದ ಮಾಡಿದರೆ ಮತ್ತೆ ನಾನು ಸಿಎಂ ಆಗಬಾರದಾ ?  ಜನರ ಬಾಯಿ ಮುಚ್ಚಿಸಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.

ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಹಗಲು ಕನಸು ಕಾಣುತ್ತಿದ್ದಾರೆ. ಅವರು ಹೇಳಿದ್ದನ್ನೆ ಹತ್ತು ಸಲ ಹೇಳುತ್ತಾರೆ. ಅದನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವಿಲ್ಲ  ಎಂದು ಹೇಳಿದರು.

ಜಿಟಿ ದೇವೇಗೌಡರ ಹೇಳಿಕೆ ಅನಗತ್ಯವಾಗಿತ್ತು: ಗೆಳೆಯ ಜಿ.ಟಿ.ದೇವೇಗೌಡರು ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಮಾತನಾಡತೊಡಗಿದ್ದರು. ಮೈತ್ರಿಕೂಟದಲ್ಲಿ ಇಂತಹದನ್ನು ಮಾಡಬಾರದು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

"ನನ್ನ ಯಾವ ಕಾರ್ಯಕ್ರಮವೂ Populist ಇಲ್ಲವೇ ತಾತ್ಕಾಲಿಕ ಅಲ್ಲ. ಅನ್ನಭಾಗ್ಯ,ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ.... ಇವುಗಳನ್ನು ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ. ಜಾಗೃತ ಮತದಾರರು ಇರುವ ವರೆಗೆ ಇವೆಲ್ಲ ಶಾಶ್ವತ ಕಾರ್ಯಕ್ರಮಗಳು. ಟೀಕಾಕಾರರಿಗೆ ನೆನಪಿರಲಿ" ಎಂದು ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News