×
Ad

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: 16ಕ್ಕೆ ಸಹಿಷ್ಣುತೆ, ದೇಹದಾರ್ಢ್ಯತ ಪರೀಕ್ಷೆ

Update: 2019-05-14 20:04 IST

ಉಡುಪಿ, ಮೇ14: ಉಡುಪಿ ಜಿಲ್ಲೆಯ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಯ ನೇಮಕಾತಿ ಸಂಬಂಧ ಅರ್ಜಿ ಸಲ್ಲಿಸಿರುವ ಅರ್ಹ ಅ್ಯರ್ಥಿಗಳಿಗೆ ಮೇ 16ರಂದು ಬೆಳಗ್ಗೆ 6:30ಕ್ಕೆ ಉಡುಪಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಹಿಷ್ಣುತೆ ಮತ್ತು ದೇಹದಾರ್ಢ್ಯತಾ ಪರೀಕ್ಷೆಯನ್ನು ನಡೆಸಲಾಗುವುದು.

ಲಿಖಿತ ಪರೀಕ್ಷೆಗೆ ಹಾಜರಾಗುವ ಅ್ಯರ್ಥಿಗಳು ಪ್ರವೇಶ ಪತ್ರ ಮತ್ತು ನಿಗದಿತ ಗುರುತಿನ ಚೀಟಿಯೊಂದಿಗೆ ಹಾಜರಾಗಬೇಕು. ಲಿಖಿತ ಪರೀಕ್ಷೆಯ ಪ್ರವೇಶ ಪತ್ರಕ್ಕಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.inನ್ನು ಪರಿಶೀಲಿಸ ಬಹುದಾಗಿದೆ.

ಮೇ 16ರಂದು ಕ್ರೀಡಾಂಗಣದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಯ ಅ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ನಡೆಯಲಿ ರುವುದರಿಂದ ಆ ದಿನದಂದು ಬೆಳಗ್ಗೆ 5ರಿಂದ ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News