‘ವಯೋಶ್ರೇಷ್ಠ ಸಮ್ಮಾನ್’ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಮೇ 14: ಭಾರತ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ಹೊಸದಿಲ್ಲಿ ಇವರು 2019-20ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ/ ಸಂಸ್ಥೆಗಳಿಂದ ‘ವಯೋಶ್ರೇಷ್ಠ ಸಮ್ಮಾನ್ 2019’ ರಾಷ್ಟ್ರಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಅರ್ಹ ಹಿರಿಯ ನಾಗರಿಕರು ಮತ್ತು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಯಾ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಮೂಲಕ ಪಡೆದು ಮೇ 16ರ ಒಳಗೆ ಸ್ಪಷ್ಟ ಶಿಪಾರಸ್ಸಿನೊಂದಿಗೆ ಆಂಗ್ಲಬಾಷೆಯಲ್ಲಿ ನಿಗದಿತ ನಮೂನೆಯಲ್ಲಿ ದ್ವಿಪ್ರತಿಗಳಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್-http://socialjustice.nic.in-ನ್ನು ಪರಿಶೀಲಿಸುವಂತೆ ಮತ್ತು ಆಯಾ ಜಿಲ್ಲೆಗಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಮತ್ತು ನಿರ್ದೇಶಕರು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು, ದೂರವಾಣಿ ಸಂಖ್ಯೆ: 080-22866066, 080-22866046ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.