×
Ad

ಕರಾವಳಿ ಮಹಿಳೆಯರಿಗೆ ಬೆಂಗಳೂರಲ್ಲಿ ಟ್ರಾನ್ಸಿಟ್ ಹಾಸ್ಟೆಲ್

Update: 2019-05-14 21:54 IST

ಮಂಗಳೂರು, ಮೇ 14: ಕರಾವಳಿ ಭಾಗದಿಂದ ಬೆಂಗಳೂರು ನಗರಕ್ಕೆ ಉದ್ಯೋಗ-ಸಂದರ್ಶನ, ಪ್ರವೇಶ ಪರೀಕ್ಷೆಗಳಿಗೆ ಒಂಟಿಯಾಗಿ ಬರುವಂತಹ ಎಲ್ಲ ವರ್ಗದ ಮಹಿಳೆಯರಿಗೆ ವರಮಾನ ಮಿತಿಯಿಲ್ಲದೇ ಮೂರು ದಿನಗಳವರೆಗೂ ಉಚಿತ ಊಟೋಪಹಾರ ಮತ್ತು ಸುರಕ್ಷಿತ ವಾಸ್ತವ್ಯವನ್ನು ಟ್ರಾನ್ಸಿಟ್ ಹಾಸ್ಟೆಲ್‌ಗಳಲ್ಲಿ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

2018-19ನೇ ಸಾಲಿನ ಆಯವ್ಯಯ ಘೋಷಣೆಯಂತೆ ಮಹಿಳೆಯರಿಗಾಗಿ ಟ್ರಾನ್ಸಿಟ್ ಹಾಸ್ಟೆಲ್‌ಗಳನ್ನು ತೆರೆಯಲಾಗಿದ್ದು, ಫಲಾನುಭವಿಗಳು ಸೌಲಭ್ಯಗಳನ್ನು ಬಳಸಿಕೊಳ್ಳಬಹುದಾಗಿದೆ.

ಬೆಂಗಳೂರಲ್ಲಿ 13 ಟ್ರಾನ್ಸಿಟ್ ಹಾಸ್ಟೆಲ್‌ಗಳು:  ಕರ್ನಾಟಕ ಸ್ಟೇಟ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್ಫೇರ್, ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (ದೂ.ಸಂ.: 080- 23330846, 22925898). ಶ್ರೀ ಶಾರದಾ ಕುಟೀರ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ಶಂಕರಾಪುರ (080- 26674697). ಯಂಗ್ ವುಮೆನ್ ಕ್ರಿಶ್ಚಿಯನ್ ಅಸೋಸಿಯೇಶನ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080- 22238574), ಯುನಿವರ್ಸಿಟಿ ವುಮೆನ್ಸ್ ಅಸೋಸಿಯೇಶನ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080-22223314, 26631838, 9845023783).

ಮಹಾತ್ಮಾಗಾಂಧಿ ವಿದ್ಯಾಪೀಠ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080- 26662226), ಜಯನಗರ ಸ್ತ್ರೀ ಸಮಾಜ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080- 26674697), ಆಲ್ ಇಂಡಿಯಾ ವುಮೆನ್ಸ್ ಕಾನ್ಫರೆನ್ಸ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080- 26349676). ಬಸವ ಸಮಿತಿ, ಬಸವ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080- 22723355), ವಿಶಾಲ್ ವಿದ್ಯಾ ಸಂಸ್ಥೆ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (9341289653). ಕರ್ನಾಟಕ ರೂರಲ್ ಪೂರ್ ಆ್ಯಂಡ್ ಹ್ಯಾಂಡಿಕ್ಯಾಪ್ಡ್ ಡೆವೆಲಪ್‌ಮೆಂಟ್ ಸೊಸೈಟಿ, ವರ್ಕಿಂಗ್ ವುಮೆನ್ಸ್ ಹಾಸ್ಟೆಲ್, ಪೀನ್ಯಾ. ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯನ್ ಯುನಿವರ್ಸಿಟಿ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080- 231604331), ಯಂಗ್ ವುಮೆನ್ ಕ್ರಿಶ್ಚಿಯನ್ ಅಸೋಸಿಯೇಶನ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080- 25634813), ರೀಜಿನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಗ್ಲಿಷ್ ಸೌತ್ ಇಂಡಿಯಾ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080- 23213243, 23218452)ನ್ನು ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News