ಸರಕಾರಕ್ಕೆ ಒಂದು ವರ್ಷ: ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

Update: 2019-05-14 18:04 GMT

ರಾಮನಗರ, ಮೇ 14: ರಾಜ್ಯ ಸರಕಾರ ಇದೇ ಮೇ 23ಕ್ಕೆ ಒಂದು ವರ್ಷ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರದ ಕಾರ್ಯಕ್ರಮಗಳನ್ನು ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದೆ.

ಸರಕಾರ ಒಂದು ವರ್ಷದಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತು ಪ್ರಥಮ ಪಿ.ಯು.ಸಿ ಇಂದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 1 ಸಾವಿರ ಪದಗಳಿಗೆ ಮೀರದಂತೆ ಕನ್ನಡದಲ್ಲೇ ಪ್ರಬಂಧ ಬರೆದು ಕಾಲೇಜು ಪ್ರಾಂಶುಪಾಲರ ದೃಢೀಕರಣದೊಂದಿಗೆ ಕಳುಹಿಸಬಹುದಾಗಿದೆ.

ಅತ್ಯುತ್ತಮ ಪ್ರಬಂಧ ಬರೆದವರಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಎರಡು ಸಮಾಧಾನಕರ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದು. ಪ್ರಬಂಧಗಳನ್ನು ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ.101, ನೆಲಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಗೌಸಿಯಾ ಕಾಲೇಜು ಎದುರು, ಮಾರುತಿ ನಗರ, ರಾಮನಗರ-562159 ಇಲ್ಲಿ ನೇರವಾಗಿ ಅಥವಾ ಅಂಚೆ ಮೂಲಕ ಜೂ.10ರೊಳಗೆ ಕಳುಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News