ಎಂ. ಮೋನಪ್ಪ ಸಾಲ್ಯಾನ್ ಮೂಡುಬಿದಿರೆ

Update: 2019-05-14 18:05 GMT

ಮೂಡುಬಿದಿರೆ: ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯಲ್ಲಿ ಪತ್ರಾಂಕಿತ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಮೂಡುಕೊಣಾಜೆಯ ಎಂ. ಮೋನಪ್ಪ ಸಾಲ್ಯಾನ್(64) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ 14ರಂದು ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. 

ಮೂಡುಬಿದಿರೆ ಪ್ರಾಂತ್ಯ ಪ್ರೌಢಶಾಲೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆಗೆ ಸೇರಿದ್ದ ಮೋನಪ್ಪ ಬಳಿಕ ಕಾರ್ಕಳ ಬಿಇಒ, ಮಂಗಳೂರು, ಉಡುಪಿಯ ಡಿಡಿಪಿಐ ಕಛೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸಿದ್ದರು. 

ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಶ್ರಾಂತ ನಿರ್ದೇಶಕ ಆನಂದ ಸಹಿತ ಶಿಕ್ಷಣ ಇಲಾಖೆಯ ಪ್ರಮುಖರು ಮೃತರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News