ಕೊಹ್ಲಿ ವರ್ಷದ ಅತ್ಯುತ್ತಮ ಅಂತರ್ ರಾಷ್ಟ್ರೀಯ ಬ್ಯಾಟ್ಸ್ ಮನ್

Update: 2019-05-15 02:16 GMT

ಸಿಯೆಟ್ ಕ್ರಿಕೆಟ್ ಅವಾರ್ಡ್ಸ್

ಹೊಸದಿಲ್ಲಿ, ಮೇ 14: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸಿಯೆಟ್‌ನ ವರ್ಷದ ಅತ್ಯುತ್ತಮ ಅಂತರ್‌ರಾಷ್ಟ್ರೀಯ ಬ್ಯಾಟ್ಸ್‌ಮನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೇ ವೇಳೆ ಭಾರತದ ಜಸ್‌ಪ್ರೀತ್ ಬುಮ್ರಾ ವರ್ಷದ ಅತ್ಯುತ್ತಮ ಬೌಲರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.

ಮಹಿಳಾ ವಿಭಾಗದಲ್ಲಿ ಸ್ಮತಿ ಮಂಧಾನಾ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಾಜಿ ಕ್ರಿಕೆಟಿಗ ಮೊಹಿಂದರ್ ಅಮರನಾಥ್ ಕ್ರೀಡಾಕ್ಷೇತ್ರದಲ್ಲಿ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.

ಕೊಹ್ಲಿ ಐಸಿಸಿ ವರ್ಷದ ಕ್ರಿಕೆಟಿಗ, ಐಸಿಸಿ ಪುರುಷರ ಟೆಸ್ಟ್ ತಂಡದ ಆಟಗಾರ, ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ, ಐಸಿಸಿ ವರ್ಷದ ಟೆಸ್ಟ್ ಮತ್ತು ಏಕದಿನ ತಂಡದ ನಾಯಕ ಎಂಬ ಪ್ರಶಸ್ತಿ ಪಡೆದಿದ್ದಾರೆ.

 ಕೊಹ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿಲ್ಲ. ಲಂಡನ್‌ನಲ್ಲಿ ಮೇ 30ರಂದು ಆರಂಭವಾಗಲಿರುವ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ‘‘ ಇದು ನನಗೆ ಶ್ರೇಷ್ಠ ಗೌರವ’’ ಎಂದು ಜೀವ ಮಾನ ಶ್ರೇಷ್ಠ ಗೌರವ ಪಡೆದಿರುವ 1983ರ ವಿಶ್ವಕಪ್ ಭಾರತ   ಜಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತದ ಮಾಜಿ ಆಲ್‌ರೌಂಡರ್ ಮೊಹಿಂದರ್ ಅಮರನಾಥ್ ಹೇಳಿದ್ದಾರೆ. ಸುನೀಲ್ ಗವಾಸ್ಕರ್ ಪ್ರಶಸ್ತಿ ಪ್ರದಾನ ಮಾಡಿದರು. ಆಸ್ಟ್ರೇಲಿಯದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಜಯಿಸಿದ ಭಾರತದ ಆರಂಭಿಕ ದಾಂಡಿಗ ಚೇತೇಶ್ವರ ಪೂಜಾರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಇದೀಗ ಅವರಿಗೆ ಅಂತರ್‌ರಾಷ್ಟ್ರೀಯ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ, ರೋಹಿತ್ ಶರ್ಮಾ ವರ್ಷದ ಅಂತರ್‌ರಾಷ್ಟ್ರೀಯ ಏಕದಿನ ಕ್ರಿಕೆಟಿಗ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News