ಮಂಗಳೂರು ವಿಮಾನ ನಿಲ್ದಾಣದಲ್ಲಿ 34.75 ಲಕ್ಷ ರೂ. ಮೌಲ್ಯದ ಚಿನ್ನ ವಶ

Update: 2019-05-15 15:26 GMT

ಮಂಗಳೂರು, ಮೇ 15: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಕಸ್ಟಮ್ ಅಧಿಕಾರಿಗಳು ದುಬೈಯಿಂದ ಆಗಮಿಸಿದ ಪ್ರಯಾಣಿಕನೊಬ್ಬನಿಂದ 34.75 ಲಕ್ಷ ರೂ. ಮೌಲ್ಯದ 1052.90 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ದುಬೈಯಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೊಬ್ಬನನ್ನು ಕಸ್ಟಮ್ ಅಧಿಕಾರಿಗಳು ಸಂಶಯದ ಮೇರೆಗೆ ತಪಾಸಣೆ ನಡೆಸಿದಾಗ ಆತನ ಬ್ಯಾಗ್‌ನಲ್ಲಿದ್ದ ಮಿಕ್ಸಿಯ ಮೋಟಾರ್‌ನಲ್ಲಿ ಚಿನ್ನವನ್ನು ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಕಸ್ಟಮ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News