ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಆರೆಸ್ಸೆಸ್ ಮೂಗು ತೂರಿಸಿಲ್ಲ: ಕಲ್ಲಡ್ಕ ಪ್ರಭಾಕರ ಭಟ್

Update: 2019-05-15 16:13 GMT

ಮೈಸೂರು,ಮೇ.15: ಬಿಜೆಪಿಯ ಘಟಾನುಘಟಿ ನಾಯಕರಾದ ಅಡ್ವಾಣಿ, ಮುರಳಿಮನೋಹರ ಜೋಶಿ ಅವರು ದೊಡ್ಡ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿದ್ದರಿಂದ  ಮತ್ತು ಅವರ ಆಶೀರ್ವಾದದಿಂದಲೇ ನರೇಂದ್ರ ಮೋದಿ ದೇಶದ ಪ್ರಧಾನಿ ಆಗಿದ್ದು ಎಂದು ಸಂಘಪರಿವಾರದ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಮೈಸೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಅಡ್ವಾಣಿ, ಮುರಳಿಮನೋಹರ ಅವರು ದೊಡ್ಡಮಟ್ಟದಲ್ಲಿ ಪಕ್ಷ ಕಟ್ಟಿದ್ದರಿಂದಲೇ ನರೇಂದ್ರ ಮೋದಿ ಪ್ರಧಾನಿಯಾಗಿರುವುದು. ಅಡ್ವಾಣಿ ನನ್ನನ್ನು ಕಡೆಗಣಿಸಿದ್ದಾರೆ ಎಂದು ಎಲ್ಲೂ ಹೇಳಿಲ್ಲ ಇದೆಲ್ಲ ಮಾಧ್ಯಮಗಳ ಸೃಷ್ಟಿ ಅವರ ಆಶೀರ್ವಾದದಿಂದಲೇ ಬಿಜೆಪಿ ಈ ಮಟ್ಟಕ್ಕೆ ಬೆಳೆದಿರುವುದು ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರದಲ್ಲಿ  ಸಂಘ ಮೂಗು ತೂರಿಸಿಲ್ಲ, ಮುಂದೆಯೂ ತೂರಿಸಲ್ಲ ಎಂದ ಅವರು, ಸಂಘಕ್ಕೂ ಅದಕ್ಕೂ ಸಂಬಂಧವಿಲ್ಲ. ಸಂಘದಿಂದ ಯಾರೂ ಕೂಡ ಆಕಾಂಕ್ಷಿಗಳಿಲ್ಲ ಎಂದರು. 

ಪಶ್ಚಿಮ ಬಂಗಾಳದಲ್ಲಿ ನಡೆದ ಗಲಭೆ ಕುರಿತು ಮಾತನಾಡಿದ ಅವರು, ಕಮ್ಯುನಿಸ್ಟ್ ಸರ್ಕಾರ ಹೋಗಿ ಮಮತ ಉತ್ತಮ ಆಡಳಿತ ನಡೆಸುತ್ತಾರೆ ಎಂದುಕೊಂಡಿದ್ದೆವು. ಆದರೆ ಅವರು ಸಹ ಕಮ್ಯುನಿಸ್ಟ್ ಮನಸ್ಥಿತಿ ಹೊಂದಿದ್ದಾರೆ ಎಂದು ಹರಿಹಾಯ್ದರು.

ರಾಜ್ಯದಲ್ಲಿ ಸರ್ಕಾರ ಇದಿಯೋ ಇಲ್ಲವೋ ಎಂಬ ಸ್ಥಿತಿ ಇದೆ. 37 ಸ್ಥಾನ ಪಡೆದವರು ಮುಖ್ಯಮಂತ್ರಿಯಾಗಿರುವುದು ಸಂವಿಧಾನ ವಿಡಂಬಣೆ ಯಾದಂತೆ. ಮೇ.23 ರ ನಂತರ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಮತ್ತೊಮ್ಮೆ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News