×
Ad

ಆರ್ಕಿಟೆಕ್ಚರ್ ಕೋರ್ಸಿಗೆ ಸಿಇಟಿ ನೋಂದಣಿ ಅಗತ್ಯ

Update: 2019-05-15 21:57 IST

ಬೆಂಗಳೂರು, ಮೇ 15: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆರ್ಕಿಟೆಕ್ಚರ್ ಕೋರ್ಸ್‌ಗೆ ಪ್ರವೇಶ ಪಡೆಯಲು ಸಿಇಟಿ-2018ಕ್ಕೆ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ.

ಆರ್ಕಿಟೆಕ್ಚರ್ ಕೋರ್ಸಿನ ಪ್ರವೇಶಕ್ಕಾಗಿ ಕೇವಲ ನಾಟಾ ಪರೀಕ್ಷೆಯನ್ನು ತೆಗೆದುಕೊಂಡು ಸಿಇಟಿ-2019ಕ್ಕೆ ಆನ್‌ಲೈನ್ ಮೂಲಕ ನೋಂದಣಿ ಮಾಡಿಸದೇ ಇರುವ ಅಭ್ಯರ್ಥಿಗಳು, ಪ್ರಾಧಿಕಾರದ ವೆಬ್‌ಸೈಟಿನಲ್ಲಿ ನಿಗದಿತ ಲಿಂಕ್ ಆಯ್ಕೆ ಮಾಡಿಕೊಂಡು ಮೇ 18ರ ಸಂಜೆ 5.30ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಹಾಗೂ ನೋಂದಣಿ ಶುಲ್ಕ ಪಾವತಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News