ಮುಂಗಾರು 5 ದಿನ ವಿಳಂಬ: ಜೂನ್ 6ಕ್ಕೆ ಕೇರಳ ಪ್ರವೇಶ

Update: 2019-05-15 17:20 GMT

ಹೊಸದಿಲ್ಲಿ, ಮೇ 15: ಈ ಬಾರಿ ಮುಂಗಾರು ಮಳೆ 5 ದಿನ ವಿಳಂಬವಾಗಿ ಜೂನ್ 6ರಂದು ಕೇರಳ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬುಧವಾರ ಹೇಳಿದೆ.

 ಸಾಮಾನ್ಯವಾಗಿ ಮುಂಗಾರು ಮಳೆ ಜೂನ್ 1ರಂದು ಕೇರಳ ಕರಾವಳಿ ಪ್ರವೇಶಿಸುತ್ತದೆ ಮತ್ತು ಜುಲೈ ಮಧ್ಯಭಾಗದ ಒಳಗಡೆ ಇಡೀ ದೇಶವನ್ನು ಪ್ರವೇಶಿಸುತ್ತದೆ. ಆದರೆ, ಈ ಬಾರಿ ಮುಂಗಾರು ಮಳೆ ವಿಳಂಬವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  ಅಂಡಮಾನ್ ಸಮುದ್ರದ ದಕ್ಷಿಣ ಭಾಗ, ನಿಕೋಬಾರ್ ದ್ವೀಪಗಳು ಹಾಗೂ ಅದಕ್ಕೆ ತಾಗಿಕೊಂಡಿರುವ ಆಗ್ನೇಯ ಬಂಗಾಲಿ ಕೊಲ್ಲಿಯ ಮೇಲೆ ಮುಂಗಾರು ಮಾರುತ ಸಾಗಿ ಬರುವುದಕ್ಕೆ ಮೇ 18 ಹಾಗೂ 19ಕ್ಕೆ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ.

ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ಈ ಬಾರಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ತಿಳಿಸಿತ್ತು.

 ಪನಿ ಚಂಡಮಾರುತ ಹಾಗೂ ಇತರ ಹವಾಮಾನ ಬದಲಾವಣೆ ಕಾರಣಗಳಿಂದ ಈ ಭಾರಿ ರಾಜ್ಯಕ್ಕೂ ಮುಂಗಾರು ಪ್ರವೇಶ ವಿಳಂಬವಾಗಲಿದ್ದು, ವಾರ್ಷಿಕ ಮಳೆಯಲ್ಲೂ ಕೊರತೆ ಉಂಟಾಗುವ ಆತಂಕ ಎದುರಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News