ಖರ್ಗೆಯವರದು ಪಕ್ಷ , ಜಾತಿ ಎಲ್ಲವನ್ನೂ ಮೀರಿದ ಮಹೋನ್ನತ ವ್ಯಕ್ತಿತ್ವ: ಸಿಎಂ ಕುಮಾರಸ್ವಾಮಿ

Update: 2019-05-16 08:07 GMT

ಬೆಂಗಳೂರು, ಮೇ 16: ನಾಡಿನ ಹಿರಿಯ ರಾಜಕಾರಣಿ ಹಾಗೂ ಮುತ್ಸದ್ದಿ ಮಲ್ಲಿಕಾರ್ಜುನ ಖರ್ಗೆ ಅವರು  ಮುಖ್ಯಮಂತ್ರಿಯಾಗಬೇಕಿತ್ತು ಎಂಬ ನನ್ನ ಹೇಳಿಕೆ ಕರ್ನಾಟಕದ ಹಲವು ದಶಕಗಳ ರಾಜಕೀಯ ವಾಸ್ತವತೆಯನ್ನು ಆಧರಿಸಿದ ಮನದಾಳದ ಮಾತು. ಈ ಹೇಳಿಕೆಗೆ ರಾಜಕೀಯದ ಬಣ್ಣಕಟ್ಟಿ ಅಪಾರ್ಥ ಕಲ್ಪಿಸುವಂತೆ ವಿಶ್ಲೇಷಿಸುವುದು ಆರೋಗ್ಯಕರವಲ್ಲ ಎಂದು ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ  ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಗೆ  ತಿರುಗೇಟು ನೀಡಿರುವ ಅವರು ಈ ಹೇಳಿಕೆಯ ಮೂಲಕ ರಾಜಕೀಯ ಲಾಭ ಪಡೆಯುವ ಕೀಳು ಅಭಿರುಚಿ ನನ್ನದಲ್ಲ. ಖರ್ಗೆಯವರದು ಪಕ್ಷ , ಜಾತಿ ಎಲ್ಲವನ್ನೂ ಮೀರಿದ ಮಹೋನ್ನತ ವ್ಯಕ್ತಿತ್ವ ಎನ್ನುವುದನ್ನು ನಾವು ಮರೆಯಬಾರದು ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News